Skip to main content

Posts

ರೈಲ್ವೆ ಕಾಮಗಾರಿಯಿಂದ ಮನೆ ತೆರವು ಆತಂಕ : ಶಾಂತಿನಗರ ನಿವಾಸಿಗಳಿಗೆ ‍ ಧೈರ್ಯ ತುಂಬಿದ ಆಮ್ ಆದ್ಮಿ ಪಕ್ಷದ ಮುಖಂಡ ಅರ್ಜುನ್ ಹಲಗಿಗೌಡರ

9  ಸ್ಟೋರಿ    :    ಮೆಹಬೂಬ ಮ ಬಾರಿಗಡ್ಡಿ ಕಲಾಂ ಎಕ್ಸಪ್ರೆಸ್ ನ್ಯೂಸ್ ಸಂಪಾದಕರು  ತೇರದಾಳ, ಜು. ೫: ತೇರದಾಳ ವಿಧಾನಸಭಾ ಕ್ಷೇತ್ರದ ರಬಕವಿ-ಬನಹಟ್ಟಿ ನಗರಸಭೆ ವ್ಯಾಪ್ತಿಯ ಉಪನಗರವಾದ ಶಾಂತಿನಗರ, ಹೊಸೂರು ಗ್ರಾಮದಲ್ಲಿ ಬಾಗಲಕೋಟೆ–ಕುಡಚಿ ರೈಲು ಮರ‍್ಗ ಕಾಮಗಾರಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಭೇಟಿ ನೀಡಿ, ರೈಲು ಮರ‍್ಗಕ್ಕೆ ಅಡ್ಡಿಯಾಗಿರುವ ಮನೆಗಳನ್ನು ಶೀಘ್ರದಲ್ಲೇ ಖಾಲಿ ಮಾಡುವಂತೆ ಸ್ಥಳೀಯ ನಿವಾಸಿಗಳಿಗೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಜನರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ವಿಷಯ ತಿಳಿದ ತಕ್ಷಣ ತೇರದಾಳ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಮುಖಂಡ ಅರ್ಜುನ್   ಹಲಗಿಗೌಡರ ಅವರು ಸ್ಥಳಕ್ಕೆ ಭೇಟಿ ನೀಡಿ, ಸ್ಥಳೀಯ ನಿವಾಸಿಗಳೊಂದಿಗೆ ಸಮಾಲೋಚನೆ ನಡೆಸಿದರು. ಜನರ ಸಮಸ್ಯೆಗಳನ್ನು ಆಲಿಸಿ, ಯಾವುದೇ ಕುಟುಂಬಕ್ಕೂ ಅನ್ಯಾಯವಾಗದಂತೆ ಕಾನೂನುಬದ್ಧವಾಗಿ ಹೋರಾಟ ನಡೆಸುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ  ಮಾತನಾಡಿದ ಅರ್ಜುನ್  ಹಲಗಿಗೌಡರ ಅವರು, "ರೈಲ್ವೆ ಅಭಿವೃದ್ಧಿ ಕಾಮಗಾರಿಗಳು ಜನರ ಹಿತದೃಷ್ಟಿಯಿಂದ ಅಗತ್ಯವಾಗಿದ್ದರೂ, ಆ ಕಾಮಗಾರಿಗಳ ಹೆಸರಿನಲ್ಲಿ ಬಡ ಮತ್ತು ಮಧ್ಯಮ ವರ್ಗದ  ಜನರ ಬದುಕು ಬೀದಿಗೆ ಬೀಳುವಂತಾಗಬಾರದು. ಹಲವು ವರ್ಷಗಳಿಂದ  ಇಲ್ಲಿ ವಾಸಿಸುತ್ತಿರುವ ಕುಟುಂಬಗಳಿಗೆ ...
Recent posts

https://kalaamexpressnews786.blogspot.com/2026/07/blog-post_04.html

ಮುಖ್ಯಮಂತ್ರಿಯವರ ಸೂಚನೆಗೂ ಕ್ಯಾರೇ ಎನ್ನದ ಬಿಎಲ್‌ಒಗಳು?ರಬಕವಿ–ಬನಹಟ್ಟಿಯಲ್ಲಿ ಎಸ್‌ಐಆರ್ ಕಾರ್ಯಕ್ಕೆ ಸಾರ್ವಜನಿಕರ ಅಸಮಾಧಾನ

ಮುಖ್ಯಮಂತ್ರಿಯವರ ಸೂಚನೆಗೂ ಕ್ಯಾರೇ ಎನ್ನದ ಬಿಎಲ್‌ಒಗಳು? ರಬಕವಿ–ಬನಹಟ್ಟಿಯಲ್ಲಿ ಎಸ್‌ಐಆರ್ ಕಾರ್ಯಕ್ಕೆ ಸಾರ್ವಜನಿಕರ ಅಸಮಾಧಾನ ರಬಕವಿ–ಬನಹಟ್ಟಿ, ಜು. 2:  ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ಯಶಸ್ವಿಯಾಗಿ ನಡೆಸುವ ಉದ್ದೇಶದಿಂದ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒಗಳು) ಖುದ್ದಾಗಿ ಮನೆ ಮನೆಗೆ ತೆರಳಿ ಗಣತಿ ನಮೂನೆಗಳನ್ನು ವಿತರಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟ ಸೂಚನೆ ನೀಡಿದ್ದರೂ, ರಬಕವಿ–ಬನಹಟ್ಟಿ ನಗರಸಭೆ ವ್ಯಾಪ್ತಿಯ ಹಲವು ವಾರ್ಡ್‌ಗಳಲ್ಲಿ ಈ ನಿರ್ದೇಶನ ಸಮರ್ಪಕವಾಗಿ ಅನುಷ್ಠಾನಗೊಳ್ಳುತ್ತಿಲ್ಲ ಎಂಬ ಆರೋಪಗಳು ಕೇಳಿಬಂದಿವೆ. ಸ್ಥಳೀಯರ ಪ್ರಕಾರ, ಅನೇಕ ಮನೆಗಳಿಗೆ ಬಿಎಲ್‌ಒಗಳು ಭೇಟಿ ನೀಡಿಲ್ಲ. ಕೆಲವೆಡೆ ನಮೂನೆಗಳನ್ನು ಮನೆಗಳಿಗೆ ತಲುಪಿಸದೇ, ಸಾರ್ವಜನಿಕರೇ ಬಂದು ಪಡೆದುಕೊಳ್ಳುವಂತೆ ಸೂಚಿಸಲಾಗಿದೆ ಎನ್ನಲಾಗುತ್ತಿದೆ. ಪರಿಣಾಮವಾಗಿ ಹಿರಿಯ ನಾಗರಿಕರು, ಮಹಿಳೆಯರು ಹಾಗೂ ಕೆಲಸಕ್ಕೆ ತೆರಳುವ ಕಾರ್ಮಿಕರಿಗೆ ತೊಂದರೆಯಾಗುತ್ತಿದೆ ಎಂದು ನಿವಾಸಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿಯವರು ಮನೆ ಮನೆಗೆ ತೆರಳಿ ಪ್ರತಿಯೊಬ್ಬ ಮತದಾರರನ್ನು ಸಂಪರ್ಕಿಸಿ ಅಗತ್ಯ ಮಾಹಿತಿಯನ್ನು ಸಂಗ್ರಹಿಸಬೇಕು ಎಂದು ಸೂಚಿಸಿದ್ದರೂ, ಕೆಲ ಬಿಎಲ್‌ಒಗಳು ಕೇವಲ ಔಪಚಾರಿಕತೆಗಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂಬ ಆರೋಪವೂ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಮತದಾರರ ಪಟ್ಟಿಯ ಪರಿಷ್ಕ...

ಬನಹಟ್ಟಿ ನಗರದಲ್ಲಿ ಎಸ್‌ಡಿಪಿಐ ವತಿಯಿಂದ ಎಸ್‌ಐಆರ್ ಜಾಗೃತಿ ಕಾರ್ಯಕ್ರಮ

ಬನಹಟ್ಟಿ ನಗರದಲ್ಲಿ ಎಸ್‌ಡಿಪಿಐ ವತಿಯಿಂದ ಎಸ್‌ಐಆರ್ ಜಾಗೃತಿ ಕಾರ್ಯಕ್ರಮ  ರಬಕವಿ - ಬನಹಟ್ಟಿ:  ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷ (ಎಸ್‌ಡಿಪಿಐ) ಬನಹಟ್ಟಿ ನಗರ ಘಟಕದ ವತಿಯಿಂದ ನಗರದ ಬಿಲಾಲ್ ಮಸೀದಿ ಸಮೀಪ ಎಸ್‌ಐಆರ್ (SIR) ಮ್ಯಾಪಿಂಗ್ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಎಸ್‌ಐಆರ್ ಮ್ಯಾಪಿಂಗ್ ಹಾಗೂ ಫಾರಂ ಭರ್ತಿ ಮಾಡುವ ವಿಧಾನ, ಅಗತ್ಯ ದಾಖಲೆಗಳು ಹಾಗೂ ಅರ್ಜಿ ಸಲ್ಲಿಸುವ ಪ್ರಕ್ರಿಯೆಯ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು. ಅಲ್ಲದೆ, ಸಹಾಯವಾಣಿ (Help Desk) ಮೂಲಕ ಸ್ಥಳದಲ್ಲೇ ಸಾರ್ವಜನಿಕರಿಗೆ ಉಚಿತವಾಗಿ ಫಾರಂ ಭರ್ತಿ ಮಾಡಿಕೊಡುವ ಸೇವೆಯನ್ನು ಒದಗಿಸಿದರು. ಕಾರ್ಯಕ್ರಮದಲ್ಲಿ ಸಾರ್ವಜನಿಕರು ಭಾಗವಹಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಈ ಸೇವೆಯನ್ನು ಪಡೆದುಕೊಂಡರು. ಮತದಾರರ ಮಾಹಿತಿಯನ್ನು ಸರಿಯಾಗಿ ದಾಖಲಿಸುವುದು ಮತ್ತು ಅಗತ್ಯ ಪ್ರಕ್ರಿಯೆಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುವಂತೆ, ಸಾರ್ವಜನಿಕರಲ್ಲಿ ಮನವಿ ಮಾಡಲಾಯಿತು. ಈ ಜಾಗೃತಿ ಕಾರ್ಯಕ್ರಮವು ಸಾರ್ವಜನಿಕರಿಂದ ಉತ್ತಮ ಸ್ಪಂದನೆ  ಪಡೆದುಕೊಂಡಿದ್ದು, ಮುಂದಿನ ದಿನಗಳಲ್ಲಿಯೂ ಇದೇ ರೀತಿಯ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದಾಗಿ ಎಸ್‌ಡಿಪಿಐ ನಗರ ಘಟಕ ತಿಳಿಸಿದೆ. ಈ ಸಂದರ್ಭದಲ್ಲಿ ಸಲೀಮ ನದಾಫ್ –...

ಬಿ ಜಡ್ ಜಮೀರ್ ಅಹ್ಮದ್ ಖಾನ್ ಅವರಿಗೆ ಸಚಿವ ಸ್ಥಾನ ನೀಡಲು ಮುಸ್ಲಿಂ ಸಮುದಾಯ ಅಗ್ರಹ

ಜಮೀರ್ ಅಹಮ್ಮದ್ ಖಾನ್ ಆವರಿಗೆ ಸಚಿವ ಸ್ಥಾನ ನೀಡಲು ಅಗ್ರಹ .  ತೇರದಾಳ ( ರಬಕವಿ ) : ರಬಕವಿ ಬನಹಟ್ಟಿ ತಾಲ್ಲೂಕು ಸಮಸ್ತ ಮುಸ್ಲಿಂ ಸಮುದಾಯದಿಂದ ಬಿ ಜಡ್ ಜಮೀರ್ ಅಹ್ಮದ್ ಖಾನ್ ಅವರಿಗೆ ಡಿಕೆ ಶಿವಕುಮಾರ್ ಸಂಪುಟದಲ್ಲಿ ಸಚಿವ ಸ್ಥಾನ ನೀಡಲು ಅಗ್ರಹಿಸಿದರು . ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಅಲ್ಪಸಂಖ್ಯಾತರ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ರಫೀಕ್ ಬಾರಿಗಡ್ಡಿ, ಜಮೀರ್ ಅಹಮ್ಮದ್ ಖಾನ್ ರವರು ಕೇವಲ ಕೇವಲ ಮುಸ್ಲಿಂ ಸಮುದಾಯಕ್ಕೆ ಸೀಮಿತವಾಗದೇ ಸರ್ವಜನಾಂಗದ ನಾಯಕರಾಗಿ ಹೊರಹಮ್ಮಿದ್ದಾರೆ. ಆಯ್ಕೆಯಾಗಿ ಬಂದಿರುವ ಚಾಮರಾಜನಗರ ಕ್ಷೇತ್ರದಲ್ಲಿ ಅಷ್ಟೇ ಅಲ್ಲದೆ ಕರ್ನಾಟಕದಾದ್ಯಂತ ಜನಪರ ಕೆಲಸಗಳ ಮೂಲಕ ರಾಜ್ಯದ ಎಲ್ಲಾ ಸಮುದಾಯಗಳ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಸರ್ವ ಜನಾಂಗದ ಅಭಿವೃದ್ಧಿ ಕಾರ್ಯಗಳು ಇದಲ್ಲದೆ , ಜನಸೇವೆ ಮಾಡುತ್ತಿರುವ ಇವರಿಗೆ ತಮ್ಮ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು ಅಗ್ರಹಿಸಿದರು . ಮೌಲಾನಾ ಮೋಹಸಿನ್ ಅಹಮದ್ ಗೋಕಾಕ್ ಅವರು ಬೀ ಜಡ್ ಜಮೀರ್ ಅಹ್ಮದ್ ಖಾನ್ ಅವರು ಯಾವುದೇ ಸಮುದಾಯಕ್ಕೆ ಸೀಮಿತವಾಗದೆ ಇಡೀ ರಾಜ್ಯದ್ಯಂತ ನಾಯಕರಾಗಿ ಹೊರಹೊಮ್ಮಿದ್ದು , ಡಿಕೆ ಶಿವಕುಮಾರ್ ಅವರು ತಮ್ಮ ಮಂತ್ರಿಮಂಡಲದಲ್ಲಿ ಸಚಿವ ಸ್ಥಾನ ನೀಡಬೇಕು ಒಂದು ವೇಳೆ ನೀಡದಿದ್ದಲ್ಲಿ , ಮುಂದಿನ ದಿನಮಾನಗಳಲ್ಲಿ ಬೇರೆ ಮಾರ್ಗ ನೋಡಿ ಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು. ಈ ಸಂದರ್ಭದಲ್ಲ...