Skip to main content

Posts

Showing posts from April, 2023

ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಮುಸ್ಲಿಮರ 2ಬಿ ಮೀಸಲಾತಿ ರದ್ದುಪಡಿಸಿದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ಮುಸ್ಲಿಮರ 2ಬಿ ಮೀಸಲಾತಿ ರದ್ದು ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ರಾಜ್ಯ ಸರ್ಕಾರದ 2ಬಿ ಮುಸ್ಲಿಂ ಮೀಸಲಾತಿ ರದ್ದು ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ಇಂದು ವಿಚಾರಣೆ ನಡೆಸಿದ್ದು, ಮೀಸಲಾತಿ ರದ್ದು ಆದೇಶಕ್ಕೆ ತಡೆ ನೀಡಿದೆ.ಮುಸ್ಲಿಮರಿಗೆ ನೀಡಿದ್ದ 2ಬಿ ಮೀಸಲಾತಿಯನ್ನು ರಾಜ್ಯ ಸರ್ಕಾರವು ಇತ್ತೀಚೆಗೆ ರದ್ದು ಮಾಡಿತ್ತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಕೆ.ಎಂ. ಜೋಸೆಫ್ ನೇತೃತ್ವದ ನ್ಯಾಯಪೀಠ ಇಂದು ವಿಚಾರಣೆ ನಡೆಸಿದ್ದು, ಮುಸ್ಲಿಮರಿಗೆ ನೀಡಿದ್ದ2ಬಿ ಮೀಸಲಾತಿ ರದ್ದು ಆದೇಶಕ್ಕೆ ತಡೆ ನೀಡಿದೆ. ಈ ಮೂಲಕ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ.  

ಬನಹಟ್ಟಿ ನಗರದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಈದ್ಗಾ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಮುಸ್ಲಿಮರು :

   ರಬಕವಿ ಬನಹಟ್ಟಿ :  ರಾಜ್ಯದಾದ್ಯಂತ  ಮುಸ್ಲಿಂ ಬಾಂಧವರು ಇಂದು ರಂಜಾನ್ ಹಬ್ಬ   ಅತಿ ಸಡಗರ ಸಂಭ್ರಮದಿಂದ ಆಚರಿಸಿದರು. ಹಬ್ಬದ ಪ್ರಯುಕ್ತ  ಬನಹಟ್ಟಿ :ನಗರದ  ಲಕ್ಷ್ಮೀ ಬಡಾವಣೆಯ ಈದ್ಗಾ ಮೈದಾನದಲ್ಲಿ ಸಾವಿರಾರು ಮುಸ್ಲಿಂ ಬಾಂಧವರಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ರು. ಸಾಮೂಹಿಕ ನಮಾಜ್ ಬೆಳಗ್ಗೆ 9.೦0 ರಿಂದ 10.೦೦ ರವರೆಗೆ ಒಂದು ಗಂಟೆ ಕಾಲ ನಡೆದಿದ್ದು, ನಮಾಜ್ ವೇಳೆ ಯಾವುದೇ ರೀತಿಯ ಅಹಿತಕರ ಘಟನೆ ಜರುಗದಂತೆ  ಮೈದಾನದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ರಂಜಾನ್ ಮುಸ್ಲಿಮರ ದೊಡ್ಡ ಹಬ್ಬ. ರಂಜಾನ್ ಹಬ್ಬದ ಪ್ರಯುಕ್ತ ಹೊಸ ಬಟ್ಟೆಗಳನ್ನ ಧರಿಸಿ, ಈ ದಿನ ಎಲ್ಲರೂ ಒಬ್ಬರನ್ನೊಬ್ಬರು ತಬ್ಬಿ ಪ್ರೀತಿಯ ಶುಭಾಶಯವನ್ನು  ಕೋರಿದರು. ರಂಜಾನ್ ಆಚರಣೆಯ ದಿನಾಂಕ ಚಂದ್ರನ ಮೇಲೆ ಅವಲಂಬಿತವಾಗಿರುತ್ತದೆ. ಚಂದ್ರನ ದರ್ಶನವಾದ ಬಳಿಕ ರಂಜಾನ್ ಹಬ್ಬವನ್ನು    ಆಚರಣೆ ಮಾಡಲಾಗುತ್ತದೆ. ಹಬ್ಬದ ಹಿನ್ನೆಲೆ  ಮುಸಲ್ಮಾನರು ನಿನ್ನೆವರೆಗೂ ಉಪವಾಸ  ರೋಜಾ ಇದ್ದರು.  ಇವತ್ತಿನ ದಿನ ನಮಾಜು ಮಾಡಿ ಅಲ್ಲಾನಿಗೆ ಪ್ರಾರ್ಥನೆ ಸಲ್ಲಿಸಿದ್ರು. ಹಿಂದೂ ಬಾಂಧವರು ಕೂಡ  ಮುಸ್ಲಿಂ ಬಾಂಧವರಿಗೆ ಶುಭಾಶಯ ಕೋರುತ್ತಿರುವುದು ವಿಶೇಷವಾಗಿತ್ತು ಈ ಸಂದರ್ಭದಲ್ಲಿ ಮಾತನಾಡಿದ ಮೌಲಾನ ಝುಬೇರ್ ಸಾಬ್ ಅತ್ತಾರ್ ,  ಒ...