Tuesday, April 25, 2023

ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಮುಸ್ಲಿಮರ 2ಬಿ ಮೀಸಲಾತಿ ರದ್ದುಪಡಿಸಿದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ಮುಸ್ಲಿಮರ 2ಬಿ ಮೀಸಲಾತಿ ರದ್ದು ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ರಾಜ್ಯ ಸರ್ಕಾರದ 2ಬಿ ಮುಸ್ಲಿಂ ಮೀಸಲಾತಿ ರದ್ದು ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ಇಂದು ವಿಚಾರಣೆ ನಡೆಸಿದ್ದು, ಮೀಸಲಾತಿ ರದ್ದು ಆದೇಶಕ್ಕೆ ತಡೆ ನೀಡಿದೆ.ಮುಸ್ಲಿಮರಿಗೆ ನೀಡಿದ್ದ 2ಬಿ ಮೀಸಲಾತಿಯನ್ನು ರಾಜ್ಯ ಸರ್ಕಾರವು ಇತ್ತೀಚೆಗೆ ರದ್ದು ಮಾಡಿತ್ತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಕೆ.ಎಂ. ಜೋಸೆಫ್ ನೇತೃತ್ವದ ನ್ಯಾಯಪೀಠ ಇಂದು ವಿಚಾರಣೆ ನಡೆಸಿದ್ದು, ಮುಸ್ಲಿಮರಿಗೆ ನೀಡಿದ್ದ2ಬಿ ಮೀಸಲಾತಿ ರದ್ದು ಆದೇಶಕ್ಕೆ ತಡೆ ನೀಡಿದೆ. ಈ ಮೂಲಕ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ.  




No comments:

Post a Comment