Tuesday, June 25, 2024

ಬೆಲೆ ಏರಿಕೆ ಖಂಡಿಸಿ ಬೃಹತ್ ಪ್ರತಿಭಟನೆ

ಬೆಲೆ ಏರಿಕೆ ಖಂಡಿಸಿ ಬೃಹತ್ ಪ್ರತಿಭಟನೆ 

 ಬಾಗಲಕೋಟೆ / ರಬಕವಿ - ಬನಹಟ್ಟಿ : ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ನಗರದ ಕುಡಚಿ - ಜಮಖಂಡಿ ರಾಜ್ಯ ಹೆದ್ದಾರಿಯಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿ ಕೆಲವು ಕಾಲ ರಸ್ತೆಯನ್ನು ತಡೆದು ಭಾರತೀಯ ಜನತಾ ಪಕ್ಷವು ಬೃಹತ್ ಪ್ರತಿಭಟನೆ ಮಾಡಿದರು . 

ಪೆಟ್ರೋಲ್ ಬೆಲೆ ಲೀಟರ್ ಗೆ 3 ರೂ, ಡೀಸೆಲ್ ಬೆಲೆ 3.5 ರೂ ಹೆಚ್ಚಳದ ಅವಿವೇಕದ ಮತ್ತು ಜನವಿರೋಧಿ ನಿರ್ಧಾರವನ್ನು ಕೈಗೊಂಡಿರುವ ಜನ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ತೇರದಾಳ್ ಮತ ಕ್ಷೇತ್ರದ ಶಾಸಕರಾದ ಸಿದ್ದು ಸವದಿ ರವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು . 

 ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಸಿದ್ದು ಸೌದಿ 
ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ಇಂದಿನ ಕಾಂಗ್ರೆಸ್ ಸರ್ಕಾರದಷ್ಟು ಜನ ವಿರೋಧಿ ಸರ್ಕಾರವನ್ನು ರಾಜ್ಯದ ಜನತೆ ಎಂದೂ ಕಂಡಿಲ್ಲ. ಸುಳ್ಳು ಭರವಸೆಗಳು ಹಾಗೂ ಯೋಜನೆಗಳನ್ನು ಪೂರೈಸಲಾಗದೇ ರಾಜ್ಯದ ಖಜಾನೆಯನ್ನು ಬರಿದು ಮಾಡಿಕೊಂಡಿರುವ ಈ ಸರ್ಕಾರ ಜನಕಲ್ಯಾಣವನ್ನು ಮರೆತು ಭ್ರಷ್ಟಾಚಾರದಲ್ಲಿ ತೊಡಗಿ ರಾಜ್ಯದ ಜನತೆಯನ್ನು ಸಂಕಷ್ಟಕ್ಕೆ ತಳ್ಳುತ್ತಿದೆ ಎಂದು ಹೇಳಿದರು . 

ಪೆಟ್ರೋಲ್-ಡೀಸೆಲ್ ದರ ಆರಂಭವಷ್ಟೇ ಇನ್ನು ಈ ರಾಜ್ಯದಲ್ಲಿ ಪ್ರತಿಯೊಂದು ವಸ್ತುಗಳ ಬೆಲೆಗಳೂ ಗಗನಕ್ಕೇರಲಿದ್ದು, ಜನಸಾಮಾನ್ಯರು, ಕಾರ್ಮಿಕರು, ಬಡವರು, ರೈತರು ಮುಖ್ಯವಾಗಿ ನಮ್ಮ ನೇಕಾರರು ಹಾಗೂ ಮಧ್ಯಮ ವರ್ಗದವರು ಬೆಲೆ ಏರಿಕೆಯ ಚಕ್ರವ್ಯೂಹದಲ್ಲಿ ಸಿಲುಕಿ ನಲುಗುವ ಪರಿಸ್ಥಿತಿ ನಿರ್ಮಾಣ ಮಾಡಿದ್ದು ತಕ್ಷಣ ಈ ನಿರ್ಧಾರ ಹಿಂಪಡೆಯುವಂತೆ ಎಚ್ಚರಿಸಿದರು 
 
ಈ ಸಂದರ್ಭದಲ್ಲಿ ರಬಕವಿ. ಬನಹಟ್ಟಿ ಬಿಜೆಪಿ ನಗರ ಘಟಕದ ಧ್ಯಕ್ಷರಾದ . ಶ್ರೀಶೈಲ್ ಬೀಳಗಿ ಗ್ರಾಮೀಣ ಮಂಡಲದ ಅಧ್ಯಕ್ಷರಾದ ಸುರೇಶ್ ಅಕ್ಕಿವಾಟ್ ,ಮತ್ತು ಪಕ್ಷದ ಮುಖಂಡರುಗಳು ಹಾಗೂ ಕಾರ್ಯಕರ್ತರು ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

 ವರದಿ : ಮಹಬೂಬ್ ಎಂ ಬಾರಿಗಡ್ಡಿ

No comments:

Post a Comment