ರೈಲ್ವೆ ಕಾಮಗಾರಿಯಿಂದ ಮನೆ ತೆರವು ಆತಂಕ : ಶಾಂತಿನಗರ ನಿವಾಸಿಗಳಿಗೆ ಧೈರ್ಯ ತುಂಬಿದ ಆಮ್ ಆದ್ಮಿ ಪಕ್ಷದ ಮುಖಂಡ ಅರ್ಜುನ್ ಹಲಗಿಗೌಡರ
9 ಸ್ಟೋರಿ : ಮೆಹಬೂಬ ಮ ಬಾರಿಗಡ್ಡಿ ಕಲಾಂ ಎಕ್ಸಪ್ರೆಸ್ ನ್ಯೂಸ್ ಸಂಪಾದಕರು ತೇರದಾಳ, ಜು. ೫: ತೇರದಾಳ ವಿಧಾನಸಭಾ ಕ್ಷೇತ್ರದ ರಬಕವಿ-ಬನಹಟ್ಟಿ ನಗರಸಭೆ ವ್ಯಾಪ್ತಿಯ ಉಪನಗರವಾದ ಶಾಂತಿನಗರ, ಹೊಸೂರು ಗ್ರಾಮದಲ್ಲಿ ಬಾಗಲಕೋಟೆ–ಕುಡಚಿ ರೈಲು ಮರ‍್ಗ ಕಾಮಗಾರಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಭೇಟಿ ನೀಡಿ, ರೈಲು ಮರ‍್ಗಕ್ಕೆ ಅಡ್ಡಿಯಾಗಿರುವ ಮನೆಗಳನ್ನು ಶೀಘ್ರದಲ್ಲೇ ಖಾಲಿ ಮಾಡುವಂತೆ ಸ್ಥಳೀಯ ನಿವಾಸಿಗಳಿಗೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಜನರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ವಿಷಯ ತಿಳಿದ ತಕ್ಷಣ ತೇರದಾಳ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಮುಖಂಡ ಅರ್ಜುನ್ ಹಲಗಿಗೌಡರ ಅವರು ಸ್ಥಳಕ್ಕೆ ಭೇಟಿ ನೀಡಿ, ಸ್ಥಳೀಯ ನಿವಾಸಿಗಳೊಂದಿಗೆ ಸಮಾಲೋಚನೆ ನಡೆಸಿದರು. ಜನರ ಸಮಸ್ಯೆಗಳನ್ನು ಆಲಿಸಿ, ಯಾವುದೇ ಕುಟುಂಬಕ್ಕೂ ಅನ್ಯಾಯವಾಗದಂತೆ ಕಾನೂನುಬದ್ಧವಾಗಿ ಹೋರಾಟ ನಡೆಸುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅರ್ಜುನ್ ಹಲಗಿಗೌಡರ ಅವರು, "ರೈಲ್ವೆ ಅಭಿವೃದ್ಧಿ ಕಾಮಗಾರಿಗಳು ಜನರ ಹಿತದೃಷ್ಟಿಯಿಂದ ಅಗತ್ಯವಾಗಿದ್ದರೂ, ಆ ಕಾಮಗಾರಿಗಳ ಹೆಸರಿನಲ್ಲಿ ಬಡ ಮತ್ತು ಮಧ್ಯಮ ವರ್ಗದ ಜನರ ಬದುಕು ಬೀದಿಗೆ ಬೀಳುವಂತಾಗಬಾರದು. ಹಲವು ವರ್ಷಗಳಿಂದ ಇಲ್ಲಿ ವಾಸಿಸುತ್ತಿರುವ ಕುಟುಂಬಗಳಿಗೆ ...